ಸಿದ್ದಾಪುರ: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪಟ್ಟಣ ಪಂಚಾಯತ ವತಿಯಿಂದ ಸ್ವಚ್ಚತಾ ಹಿ ಸೇವಾ ಅಭಿಯಾನದಡಿ ಸ್ವಭಾವ ಸ್ವಚ್ಚತೆ ಸಂಸ್ಕಾರ ಸ್ವಚ್ಚತೆ ಎಂಬ ಆಂದೋಲನದಡಿಯಲ್ಲಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಈ ವೇಳೆ ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಸಾರ್ವಜಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ನಾಯ್ಕ, ಹಿರಿಯ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಜಗದೀಶ್ ನಾಯ್ಕ, ಪಟ್ಟಣ ಪಂಚಾಯತ ಸದಸ್ಯರು, ಸಿಬ್ಬಂದಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.