Slide
Slide
Slide
previous arrow
next arrow

ಬೇಟಿ ಬಚಾವೋ ಬೇಟಿ ಪಡಾವೋ ಮಹತ್ವದ ಯೋಜನೆ : ನ್ಯಾ ರೋಹಿಣಿ ಬಸಾಪುರ

300x250 AD

ದಾಂಡೇಲಿ : ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವರನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರುವ ಮಹತ್ವದ ಆಶಯದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಭಾರತ ಸರಕಾರ ಪ್ರಾರಂಭಿಸಿರುವ ಮಹತ್ವದ ಯೋಜನೆಯಾಗಿದೆ ಎಂದು ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರೋಹಿಣಿ.ಡಿ.ಬಸಾಪುರ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಾರವಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ದಾಂಡೇಲಿ, ಶಿಶು ಅಭಿವೃದ್ಧಿ ಯೋಜನೆ ಹಳಿಯಾಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನತಾ ವಿದ್ಯಾಲಯದ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಲ್ಲಿ ಋತುಸ್ರಾವ ಹಾಗೂ ಮುಟ್ಟಿನ ನೈರ್ಮಲ್ಯ, ರಕ್ತ ಹೀನತೆಯ ದುಷ್ಪರಿಣಾಮಗಳು ಮತ್ತು ಲೈಂಗಿಕ ಶಿಕ್ಷಣ ಕುರಿತು ಸಮುದಾಯ ಆಧಾರಿತ ಕಾರ್ಯಕ್ರಮ ಹಾಗೂ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಭಾರತ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಜಾರಿ ಮಾಡಿದೆ. ಈ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲಿನ ತಾರತಮ್ಯವನ್ನು ತೊಡೆದು ಹಾಕುವುದು ಮತ್ತು ಅವರ ಬಗ್ಗೆ ಜನರಲ್ಲಿ ನಕಾರಾತ್ಮಕ ಮನೋಭಾವವನ್ನು ಬದಲಾಯಿಸುವುದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಎಚ್.ಎಸ್.ಕುಲಕರ್ಣಿ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಪರಿಣಾಮಕಾರಿಯಾಗಿದೆ ಎಂದರು.

ಹಿರಿಯ ನ್ಯಾಯವಾದಿ ಎಂ.ಸಿ.ಹೆಗಡೆ ಅವರು ಮಾತನಾಡಿ ಸುಕನ್ಯಾ ಯೋಜನೆಯ ಮೂಲಕ ಹೆಣ್ಣು ಮಕ್ಕಳ ಹೆಸರಲ್ಲಿ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಅವರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಕ್ಷೀಣಿಸುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಸುಧಾರಿಸಲು ಇದು ಪ್ರಯೋಜನಕಾರಿಯಾಗಿದೆ ಎಂದರು.

300x250 AD

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿವೇಣಿ ಅವರು ಋತುಸ್ರಾವ ಹಾಗೂ ಮುಟ್ಟಿನ ನೈರ್ಮಲ್ಯ ಮತ್ತು ರಕ್ತಹೀನತೆಯ ದುಷ್ಪರಿಣಾಮಗಳ ಬಗ್ಗೆ ವಿವರಣೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನತಾ ವಿದ್ಯಾಲಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಬಿ.ಅರವಳ್ಳಿ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಡಾ.ಲಕ್ಷ್ಮೀದೇವಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಅನುಸೂಯ ರೇಡೇಕರ್ ವಂದಿಸಿದರು. ಶಿಕ್ಷಕಿ ರಾಜೇಶ್ವರಿ ಕುಂಬಾರ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ನ್ಯಾಯವಾದಿಗಳು, ಜನತಾ ವಿದ್ಯಾಲಯ ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಹಾಯಕಿಯರು, ಉಪಸ್ಥಿತರಿದ್ದರು

Share This
300x250 AD
300x250 AD
300x250 AD
Back to top