ಶಿರಸಿ: ರಾಷ್ಟ್ರೀಯ ಪೋಷಣಾ ಮಾಸಾಚರಣಿ ಅಂಗವಾಗಿ ಸೆ. 20 ರಂದು ಸೊಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತ ಸೊಂದಾ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದಂತಹ ರಾಮಚಂದ್ರ ಹೆಗಡೆ ವಹಿಸಿಕೊಂಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುಲೆಕಲ್ ವಲಯದ ಮೇಲ್ವಿಚಾರಕಿಯರಾದ ಶ್ರೀಮತಿ ಗಿರಿಜವ್ವ ಬಿಡನಾಳ ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದಂತ ಶ್ರೀಮತಿ ಭಾರತಿ ಚೆನ್ನಯ್ಯ, ಸದಸ್ಯರಾದಂತಹ ಮಂಜುನಾಥ್ ಭಂಡಾರಿ, ನಾಗರಾಜ್ ಪೂಜಾರಿ, ಮಮತಾ ಜೈನ್ ಗ್ರಾಮ ಅಭಿವೃದ್ಧಿ ಅಧಿಕಾರಿಗಳದಂತ ಕಲ್ಲಪ್ಪ ಎಂ ಸಿಎಚ್ಒ ಆದಂತಹ ಉಷಾ ರಾಣಿ ಭಾಗವಹಿಸಿದ್ದರು. ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಆಶಾ ಕಾರ್ಯಕರ್ತೆಯರು ಸ್ತ್ರೀಶಕ್ತಿ ಸಂಘದ ಸದಸ್ಯರು ಭಾಗವಹಿಸಿ ಗರ್ಭಿಣಿಗೆ ಸೀಮಂತ ಕಾರ್ಯಕ್ರಮ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಮತ್ತು ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆಯನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು.