ಸಿದ್ದಾಪುರ: ಶಿರಸಿಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ಸಿದ್ದಾಪುರದ ಜೋಗ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಳಿಂಗರಾಜ್ ಎಂ.ಎಸ್. ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕಾಳಿಂಗರಾಜ್ ಎಂ.ಎಸ್., ಜನಜಾಗೃತಿ ವೇದಿಕೆ ಉತ್ತಮ ಕಾರ್ಯಕ್ರಮವನ್ನು ನಡೆಸುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಮುಂದಾಗುತ್ತಿದೆ. ಡಾ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಂತೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಎಲ್ಲ ಯೋಜನಾಧಿಕಾರಿಗಳಿಗೆ ತಿಳಿಸಲಾಯಿತು.
ಅ.2ರ ಕಾರ್ಯಕ್ರಮವನ್ನು ಸಿದ್ದಾಪುರ ಹಾಗೂ ಶಿರಾಳಕೊಪ್ಪದಲ್ಲಿ ಆಚರಿಸುವ ಮತ್ತು ಯಲ್ಲಾಪುರದಲ್ಲಿ ಮದ್ಯವರ್ಜನ ಶಿಬಿರ ನಡೆಸುವ ಕುರಿತು ವಿಶೇಷ ಚರ್ಚೆ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಕಾರ್ಯದರ್ಶಿ ಎ.ಬಾಬು ನಾಯ್ಕ ವರದಿಯನ್ನು ವಾಚಿಸಿ ಮಾತನಾಡಿದರು. ಜನಜಾಗೃತಿ ಸಾಧನಾ ವರದಿಯ ಮಾಹಿತಿಯನ್ನು ಎಲ್ಲ ಯೋಜನಾಧಿಕಗಳು ವಿವರಿಸಿದರು.
ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ವಿವೇಕ್ ರಾಯ್ಕರ್ ಶಿರಸಿ, ಸುಬಾಷ್ ನಾಯ್ಕ ಕಾನಸೂರು ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಗೌರಿ ನಾಯ್ಕ ರಾಮನಬೈಲ್ ಶಿರಸಿ ಹಾಗೂ ಸಿದ್ದಾಪುರ, ಶಿರಸಿ, ಯಲ್ಲಾಪುರ-ಮುಂಡಗೋಡ, ಶಿಕಾರಿಪುರ, ಸಾಗರ, ಸೊರಬ ತಾಲೂಕಿನ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದು ಜನಜಾಗೃತಿ ವೇದಿಕೆಯ ಕಾರ್ಯಕ್ರಮದ ಕುರಿತು ಚರ್ಚೆ ನಡೆಸಿದರು.