Slide
Slide
Slide
previous arrow
next arrow

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

300x250 AD

ಕಾರವಾರ: ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಸೆ.29 ರಂದು ಜಿಲ್ಲೆಯ 17 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿವೆ.

ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ. ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ಗಳನ್ನು ತರಲು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top