ಹೊನ್ನಾವರ : ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಸೋಮವಾರ ಬೆಳಗ್ಗೆ ತಾಲೂಕು ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳು, ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಸೆ.26ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ತಹಸೀಲ್ದಾರ್ ಮುಖಾಂತರ ಮನವಿ ಕೊಡುವುದಾಗಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ಮಾಡಲಿದ್ದು, ಬೇಡಿಕೆ ಈಡೇರದೆ ಇದ್ದಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳ 17 ಕ್ಕೂ ಹೆಚ್ಚು ಬೇಡಿಕೆಗಳಾದ ಮೊಬೈಲ್ ಆ್ಯಪ್, ವೈಬ್ ಅಪ್ಲಿಕೇಷನ್ ಸೇರಿ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡವಿದ್ದು, ಮೊಬೈಲ್, ಲ್ಯಾಪ್ಟ್ಯಾಪ್, ಇಂಟರ್ನೆಟ್, ಸ್ಕ್ಯಾನರ್ ವ್ಯವಸ್ಥೆ ಕಲ್ಪಿಸಬೇಕು. ನೌಕರರಿಗೆ ಉತ್ತಮ ಗುಣಮಟ್ಟದ ಟೇಬಲ್ ಖುರ್ಚಿ ವಿತರಣೆ, ಮೊಬೈಲ್, ಸಿಮ್, ಪ್ರಿಂಟರ್ ಸೇರಿದಂತೆ, ಭತ್ಯೆಯನ್ನು 500ರೂ ರಿಂದ 3ಸಾವಿರ ರೂ ಹೆಚ್ಚಳ ಮಾಡಬೇಕೆಂದು ನೀಡಬೇಕೆಂದು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹೇಂದ್ರ ಗೌಡ, ಅಧ್ಯಕ್ಷ ಜ್ನಾನೇಶ ಎಂ ಎಲ್, ಉಪಾಧ್ಯಕ್ಷ ವೈಭವಿ ಭಂಡಾರಿ, ಪ್ರಧಾನ ಕಾರ್ಯದರ್ಶಿ ರಕ್ಷಿತ ಪೂಜಾರಿ, ಪಧಾಧಿಕಾರಿಗಳು, ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಹಾಜರಿದ್ದರು.