Slide
Slide
Slide
previous arrow
next arrow

ಶ್ರದ್ಧೆಯಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಿ ; ಟಿ.ವೈ. ದಾಸನಕೊಪ್ಪ

300x250 AD

ಮುಂಡಗೋಡ: ಸ್ವಚ್ಛತಾ ಅಭಿಯಾನ ನಡೆಸಬೇಕಿದೆ ಎಂಬ ಕಾರಣಕ್ಕೆ ಕಾಟಾಚಾರಕ್ಕಾಗಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸದೆ, ಅತ್ಯಂತ ಶ್ರದ್ಧೆಯಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಆಗ ಮಾತ್ರ ಯಾವುದೇ ಅಭಿಯಾನ ಯಶಸ್ವಿಯಾಗಲು ಸಾಧ್ಯ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ ಹೇಳಿದರು.
ಅವರು ಶುಕ್ರವಾರ ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯತ್ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ರ ಅಂಗವಾಗಿ ಆಯೋಜಿಸಿದ್ದ ತಾಲೂಕು ಕ್ರೀಡಾಂಗಣ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರು ಗ್ರಾಮಗಳ ಸ್ವಚ್ಛತೆಯಿಂದ ದೇಶದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡಿದ್ದರು. ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸ್ವಚ್ಛತಾ ಸಂಬAಧ ವಿಶಿಷ್ಟ ಕಾರ್ಯಕ್ರಮಗಳನ್ನು ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಧ್ಯೇಯ ವಾಕ್ಯದಡಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯದಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅವಶ್ಯವಾಗಿದೆ ಎಂದರು.
ಸ್ವಚ್ಛತಾ ಕಾರ್ಯಕ್ಕೂ ಪೂರ್ವದಲ್ಲಿ ಎಲ್ಲರೂ ಒಕ್ಕೂರಿಲಿನಿಂದ ಸ್ವಚ್ಛತಾ ಆಂದೋಲನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಕರ ಬಿ, ಪಂಚಾಯತ ರಾಜ್ ಇಂಜಿನೀಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರದೀಪ ಭಟ್, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರಾಜೇಶ್ವರಿ ಕದಂ, ಹಿರಿಯ ತೋಟಗಾರಿಕಾ ನಿರ್ದೇಶಕ ಕೃಷ್ಣ ಟಿ ಕೊಳ್ಳುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top