ದಾಂಡೇಲಿ : ಅರಣ್ಯ ಇಲಾಖೆಯ ವಿರ್ನೋಲಿ ಅರಣ್ಯ ವಲಯದ ಬೈಲುಪಾರಿನಲ್ಲಿ ನೂತನವಾಗಿ ನಿರ್ಮಿಸಿದ ಸಿಬ್ಬಂದಿಗಳ ವಸತಿಗೃಹಗಳ ಸಮುಚ್ಚಯ ಕಟ್ಟಡದ ಉದ್ಘಾಟನೆಯನ್ನು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಬುಧವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅರಣ್ಯ ರಕ್ಷಣೆಯಲ್ಲಿ ತಮ್ಮನ್ನು ತಾವು ಬದ್ಧತೆಯಿಂದ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿ ನೂತನ ಕಟ್ಟಡದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ಎಸ್.ವೈದ್ಯ ಮತ್ತು ಶಿರಸಿ – ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಅವರು ಶುಭ ಹಾರೈಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್, ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತಕುಮಾರ್ ಕೆ.ಸಿ, ವನ್ಯಜೀವಿ ಇಲಾಖೆಯ ನಿರ್ದೇಶಕರಾದ ನಿಲೇಶ ಶಿಂದೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ ಚೌವ್ಹಾಣ್, ಎಂ.ಎಸ್.ಕಳ್ಳಿಮಠ ಮತ್ತು ಗಿರೀಶ ಶಂಕರಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ವಲಯಾರಣ್ಯಾಧಿಕಾರಿಗಳಾದ ಮಹೀಮ್ ಜನ್ನು ಸ್ವಾಗತಿಸಿದ ಕಾರ್ಯಕ್ರಮಕ್ಕೆ ಬಸವರಾಜ್ ಎಂ ವಂದಿಸಿದರು.