Slide
Slide
Slide
previous arrow
next arrow

ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಶಿರಸಿ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,
ಬಾಗಲಕೋಟದಲ್ಲಿ 2024-25ನೇ ಸಾಲಿನಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಧೈಯದೊಂದಿಗೆ ”ತೋಟಗಾರಿಕಾ ಮೇಳ”ವನ್ನು ಹಮ್ಮಿಕೊಳ್ಳಲಾಗಿದೆ.

ಸದರಿ ತೋಟಗಾರಿಕಾ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಶಿಷ್ಟ ಕೃಷಿಕರಿಗೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಿಗೆ ಪ್ರತಿಯೊಂದು ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆ ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಉತ್ತರ ಕನ್ನಡ ಜಿಲ್ಲೆಯ ರೈತ / ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಡೀನ್ ಕಛೇರಿ, ತೋಟಗಾರಿಕೆ ಮಹಾವಿದ್ಯಾಲಯ, ಶಿರಸಿ ಅಥವಾ ವಿಸ್ತರಣಾ ಮುಂದಾಳು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಶಿರಸಿಯಲ್ಲಿ ಪಡೆಯಬಹುದು.
ಅಥವಾ ತೋವಿವಿಯ ವೆಬ್‌ಸೈಟ್ Tel:+91www.uhsbagalkot.karnataka.gov.in ಮೂಲಕ ಕೂಡ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 05.11.2024 ರೊಳಗಾಗಿ ಡೀನ್ ಕಛೇರಿ, ತೋಟಗಾರಿಕೆ ಮಹಾವಿದ್ಯಾಲಯ, ಶಿರಸಿಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ:Tel:+9108384223055,Tel:+918310849605 ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ ಸಂಖ್ಯೆ: Tel:+911800 425 7910ಗೆ ಸಂಪರ್ಕಿಸಬಹುದು.

300x250 AD
Share This
300x250 AD
300x250 AD
300x250 AD
Back to top