Slide
Slide
Slide
previous arrow
next arrow

ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಿ ; ರಿತೇಶ್ ಕುಮಾರ್ ಸಿಂಗ್

300x250 AD

ಕಾರವಾರ: ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಪರಿಶೀಲಿಸಿ, ಅವುಗಳನ್ನು ದುರಸ್ತಿಗೊಳಿಸುವ ಅಥವಾ ಹೊಸದಾಗಿ ನಿರ್ಮಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹೇಳಿದರು.

ಅವರು ಬುಧವಾರ, ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಸರ್ಕಾರದ ನಿರ್ದೇಶನದಂತೆ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರವಹಿಸಬೇಕು. ಶಾಲೆ ಮತ್ತು ಅಂಗನವಾಡಿಗಳ ಕೊಠಡಿಗಳನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಕಾರ್ಯಗಳನ್ನು ಅಥವಾ ನೂತನ ಕೊಠಡಿ ನಿರ್ಮಾಣ ಮಾಡುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ ಎಂದ ಅವರು, ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಲ್ಲಿ ಕೈಗೊಂಡಿರುವ ಕಟ್ಟಡ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಕ್ತಾಯಗೊಳಿಸುವಂತೆ ಸೂಚಿಸಿದರು.

ಎಲ್ಲಾ ಹಾಸ್ಟೆಲ್‌ಗಳಲ್ಲಿ ಸ್ವಚ್ಚತೆಯನ್ನು ಕಾಪಾಡುವಂತೆ ಹಾಗೂ ಆಹಾರ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಮೂಲಕ ಮತ್ತು ವಿದ್ಯಾರ್ಥಿಗಳಿಗೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದರು.

300x250 AD

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರವಹಿಸುವಂತೆ ತಿಳಿಸಿದ ಅವರು, ಶುದ್ದ ನೀರು ಸರಬರಾಜು ಆಗುತ್ತಿರುವ ಕುರಿತು ಆಗಾಗ್ಗೆ ಪರಿಶೀಲನೆ ನಡೆಸುವಂತೆ ಮತ್ತು ಶುದ್ದ ಕುಡಿಯುವ ನೀರು ಸರಬರಾಜು ಸಂಬAಧಿತ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ನೀರು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯುವಕರಿಗೆ ಸೀಬರ್ಡ್ ಸೇರಿದಂತೆ ನೌಕಾನಲೆ ವ್ಯಾಪ್ತಿಯಲ್ಲಿನ ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗವಕಾಶ ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ, ಕೌಶಲ್ಯ ಮತ್ತು ತಾಂತ್ರಿಕ ವಿದ್ಯಾರ್ಹತೆಯ ಹೊಸ ಕೋರ್ಸ್ಗಳನ್ನು ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಜಿಟಿಟಿಸಿ ಯಲ್ಲಿ ಆರಂಭಿಸುವ ಅವಶ್ಯಕತೆಯಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ನ ಅನಿರ್ಬಂಧಿತ ಅನುದಾನದಡಿ ಸಿದ್ದಪಡಿಸಲಾದ ರೂ.395.14 ಲಕ್ಷ ರೂ ಮೊತ್ತದ ವಿವಿಧ ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಹಾಗೂ ಜಿಲ್ಲಾ ಪಂಚಾಯತ್ ಅಧೀನದ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top