ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅ.23 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ, ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.