Slide
Slide
Slide
previous arrow
next arrow

ನ.30ಕ್ಕೆ ರಾಜ್ಯಮಟ್ಟದ ಹೊನಲು ಬೆಳಕಿನ ಡೊಳ್ಳು ಕುಣಿತ ಸ್ಪರ್ಧೆ

300x250 AD

ಸಿದ್ದಾಪುರ: ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸಂಘಟನೆಯ ತಾಲೂಕು ಘಟಕವು ನ.30ರಂದು ಸಂಜೆ 5ರಿಂದ ಪಟ್ಟಣದ ನೆಹರೂ ಮೈದಾನದಲ್ಲಿ ಪ್ರಥಮ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ಡೊಳ್ಳು ಕುಣಿತ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಸಂಘಟನೆಯ ತಾಲೂಕು ಗೌರವಾಧ್ಯಕ್ಷ ಕೃಷ್ಣಮೂರ್ತಿ ನಾಯ್ಕ ಐಸೂರು ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ ನ.30ರಂದು ಸಂಜೆ 5 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಕ್ಷೇತ್ರ ಮಹಾಕಾಳಿ ಮಹಾಸಂಸ್ಥಾನ ನಿಪ್ಪಾಣಿಯ ಶ್ರೀ ಅರುಣಾನಂದ ತೀರ್ಥ ಸ್ವಾಮಿಜೀ ದಿವ್ಯ ಸಾನಿಧ್ಯವಹಿಸಲಿದ್ದು ಹಿರಿಯ ವಕೀಲ,ಕಾಂಗ್ರೆಸ್ ಮುಖಂಡ ಜಿ.ಟಿ.ನಾಯ್ಕ ಮಣಕಿನಗುಳಿ ಉದ್ಘಾಟಿಸುವರು. ಶಾಸಕ ಭೀಮಣ್ಣ ಟಿ.ನಾಯ್ಕ ಅಧ್ಯಕ್ಷತೆವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಕರವೇ ಜನಧ್ವನಿ ಜಿಲ್ಲಾಧ್ಯಕ್ಷ ಉಮಾಕಾಂತ ಹೊಸಕಟ್ಟ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ, ಜೆಡಿಎಸ್ ಮುಖಂಡ ಉಪೇಂದ್ರ ಪೈ, ಬಿಜೆಪಿ ಮುಖಂಡ,ಉದ್ಯಮಿ ಕೃಷ್ಣ ಎಸಳೆ, ಜೀವಜಲ ಕಾರ್ಯಪಡೆ ಅಧ್ಯಕ್ಷ,ಉದ್ಯಮಿ ಶ್ರೀನಿವಾಸ ಹೆಬ್ಬಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಸಮಾಜ ಸೇವಕ, ಜಿಲ್ಲಾ ರೈತ ಸಂಘದ ಮಾಧ್ಯಮ ವಕ್ತಾರ ಇಲಿಯಾಸ್ ಇಬ್ರಾಹೊಂ ಸಾಬ್, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ, ಸಾಮಾಜಿಕ ಮುಖಂಡ ದಿವಾಕರ ನಾಯ್ಕ ಹೆಮ್ಮನಬೈಲ್, ತಾಲೂಕ ಗ್ಯಾರೆಂಟಿ ಯೋಜನಾ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ವಿನಾಯಕ ಸೌ.ಕ್ರೆ.ಕೋಆಪ್ ಅಧ್ಯ÷ಕ್ಷ ಆನಂದ ಈರಾ ನಾಯ್ಕ ಪಾಲ್ಗೊಳ್ಳಲಿದ್ದು ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರನ್ನು, ಕಲಾವಿದರನ್ನು ಸನ್ಮಾನಿಸಲಾಗುವದು ಎಂದರು.
ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಪಿಐ ಸೀತಾರಾಮ್ ರಾಷ್ಟ್ರಪ್ರಸಿದ್ಧಿಯ ಜಾನಪದ ಕಲೆಯಾದ ಡೊಳ್ಳುಕುಣಿತದ ಸ್ಪರ್ಧೆಯನ್ನು ರಾಜ್ಯಮಟ್ಟದಲ್ಲಿ ಆಯೋಜಿಸಿರುವದು ಶಾಘ್ಲನೀಯ. ಗ್ರಾಮೀಣ ಭಾಗದ ಸಂಸ್ಕೃತಿಯನ್ನು ಬಿಂಬಿಸುವ ಈ ಕಲೆ ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅವಿಭಾಜ್ಯವಾಗಿದೆ. ಮುಂದಿನ ದಿನಗಳಲ್ಲಿ ಈ ಕಲೆಯ ಉನ್ನತಿಗೆ ಇನ್ನಷ್ಟು ಬೆಂಬಲ ದೊರಕಲಿ ಎಂದು ಆಶಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ‍್ಯಾಧ್ಯಕ್ಷ ಹೇಮಂತ ನಾಯ್ಕ, ತಾಲೂಕು ಘಟಕದ ಅಧ್ಯಕ್ಷ ಹೇಮಂತ ನಾಯ್ಕ, ಉಪಾಧ್ಯಕ್ಷರಾದ ಬಾಬು ನಾಯ್ಕ, ಸಂತೋಷ ನಾಯ್ಕ,ಪ್ರಧಾನ ಕಾರ್ಯದರ್ಶಿ ಕಾರ್ತೀಕ ನಾಯ್ಕ, ಸ್ಪರ್ಧಾ ಆಯೋಜನಾ ಸಮಿತಿ ಅಧ್ಯಕ್ಷ ರವಿಕುಮಾರ ನಾಯ್ಕ ಕೊಠಾರಿ, ಯುವ ಘಟಕದ ಅಧ್ಯಕ್ಷ ಚೇತನ ಆಚಾರಿ ಮುಂತಾದವರಿದ್ದರು.

300x250 AD
Share This
300x250 AD
300x250 AD
300x250 AD
Back to top