ಸಿದ್ದಾಪುರ: ತಾಲೂಕಿನ ನಾಣಿಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು.
ಸಿದ್ದಾಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸೀತಾರಾಮ್ ವಿದ್ಯಾರ್ಥಿಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಉತ್ತಮವಾದ ಬದುಕು ಇದೆ ವಿದ್ಯಾರ್ಥಿಗಳು ಕಾನೂನು ಪಾಲನೆಯನ್ನು ರೂಡಿಸಿಕೊಳ್ಳಬೇಕು ಅದು ಅವರಿಗೂ ಸಮಾಜಕ್ಕೂ ಹಿತವನ್ನು ಉಂಟುಮಾಡುತ್ತದೆ ಎಂದರು. ಸಬ್ ಇನ್ಸ್ಪೆಕ್ಟರ್ ಗೀತಾ ಸಿರ್ಸಿಕರ್ ಪೋಕ್ಸೋ ಕಾಯ್ದೆಯ ಕುರಿತಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ನೀಡಿದರು.
ಎ.ಎಸ್.ಐ. ಸಂಗೀತಾ ಕಾನಡೆ ಮಾತನಾಡಿ ವಿದ್ಯಾರ್ಥಿಗಳು ಸಮಯ ಪಾಲನೆ, ಶಿಸ್ತು ಪಾಲನೆ ಮತ್ತು ಕಾನೂನು ಪಾಲನೆ ಕಡೆಗೆ ಹೆಚ್ಚಿನ ಗಮನ ಹರಿಸಿದರೆ ಭವಿಷ್ಯ ಉತ್ತಮವಾಗುತ್ತದೆ ಎಂದು ತಿಳುವಳಿಕೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ಕೆ. ನಾಯ್ಕ ಹೊಸಳ್ಳಿ ಕಾನೂನಿನ ಅರಿವು ಮತ್ತು ಅದರ ಪಾಲನೆ ನಮ್ಮ ಜವಾಬ್ದಾರಿಯಾಗಿದ್ದು ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಉಪನ್ಯಾಸಕರಾದ ಎಂ.ಜಿ.ಹೆಗಡೆ ಉಪಸ್ಥಿತರಿದ್ದರು. ಎಂ.ಆಯ್.ಹೆಗಡೆ ಸ್ವಾಗತಿಸಿ ನಿರೂಪಿಸಿದರು. ಅರವಿಂದ ಪಾಟೀಲ ವಂದಿಸಿದರು.