ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಪ್ರಗತಿ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಪ್ರಗತಿ ವಿದ್ಯಾಲಯದ ನೂತನ ಕಟ್ಟಡದ ಶಿಲಾನ್ಯಾಸ-ಗೌರವ ಸಂಮಾನ- ವಾರ್ಷಿಕ ಸ್ನೇಹ ಸಮ್ಮಿಲನ-ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.3, ಮಂಗಳವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯತಿದ್ವಯರಾದ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀಮದ್ ಆನಂದಭೋದೇಂದ್ರ ಸರಸ್ವತೀ ಮಹಾಸ್ವಾಮಿಗಳು ದಿವ್ಯಸಾನಿಧ್ಯ ನೀಡಿ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತಿ ನೀಡಲಿದ್ದು, ವಿಶೇಷ ಆಮಂತ್ರಿತರಾಗಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು, ಶಾಂತಾರಾಮ ಸಿದ್ದಿ, ಕರ್ನಾಟಕ ರಾಜ್ಯ ವಿ.ಯೋ. ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಕುಂದರಗಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಯಮುನಾ ಸಿದ್ದಿ ಆಗಮಿಸಲಿದ್ದಾರೆ. ಶಿಕ್ಷಣ ಉಪನಿರ್ದೇಶಕ ಬಸವರಾಜ ಪಿ. ಕೈಬರಹ ಪತ್ರಿಕೆ ಅನಾವರಣಗೊಳಿಸಲಿದ್ದು, ಕ್ಷೇತ್ರಶಿಕ್ಷಣಾಧಿಕಾರಿ ಎನ್. ಆರ್. ಹೆಗಡೆ, ಕುಂದರಗಿ ಗ್ರಾ.ಪಂ. ಪಿಡಿಒ ರವಿ ಪಟಗಾರ ಬಹುಮಾನ ವಿತರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಿ ಚಂದಗಾಣಿಸಲು ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.