ಸಿದ್ದಾಪುರ: ಪಟ್ಟಣದ ಹೆಸ್ಕಾಂ ಆವರಣದಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಅಂಗವಾಗಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮ ಶನಿವಾರ ಜರುಗಿತು. ಐದು ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದೇವರ ದರ್ಶನಪಡೆದರು.
ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಕುಂಕುಮಾರ್ಚನೆ, ಮಂಗಳಾರತಿ, ಹಣ್ಣು ಕಾಯಿ ಸೇವೆ, ಕ್ಷೀರಾಭಿಷೇಕ, ಮತ್ತಿರ ಸೇವೆಗಳನ್ನು ಭಕ್ತರು ಸಲ್ಲಿಸಿದರು. ವಿಶೇಷವಾಗಿ ಶ್ರೀದೇವರಿಗೆ ಕನಕಾಭಿಷೇಕ ನಡೆಯಿತು. ದೇವರಿಗೆ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ಮಹಾಪೂಜೆ ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.