ದಾಂಡೇಲಿ : ಬರ್ಚಿ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಬೇವಾಡಿ ಹತ್ತಿರ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ನಸುಕಿನ ವೇಳೆಯಲ್ಲಿ ನಡೆದಿದೆ.
ಬರ್ಚಿ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಕೆಎ: 65, ಎಂ 2112 ಸಂಖ್ಯೆಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಬೇವಾಡಿಯ ಹತ್ತಿರ ಮರಕ್ಕೆ ಡಿಕ್ಕಿಯಾಗಿದೆ. ಈ ಸಮಯದಲ್ಲಿ ಕಾರಿನಲ್ಲಿದ್ದ ಏರ್ ಬ್ಯಾಗ್ ತೆರೆದ ಹಿನ್ನೆಲೆಯಲ್ಲಿ ಆಗಬಹುದಾದ ಅನಾಹುತವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ 112 ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.