Slide
Slide
Slide
previous arrow
next arrow

ಜಿಲ್ಲಾಡಳಿತದಿಂದ ವಿಜಯ ದಿವಸ ಆಚರಣೆ

300x250 AD

ಕಾರವಾರ: ಜಿಲ್ಲಾಡಳಿತದ ವತಿಯಿಂದ ವಿಜಯ ದಿವಸ ಕಾರ್ಯಕ್ರಮವು ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿರುವ ಯುದ್ಧ ನೌಕಾ ವಸ್ತು ಸಂಗ್ರಾಹಾಲಯದ ಆವರಣದಲ್ಲಿ ಸೋಮವಾರ ಜರುಗಿತು.

ಯುದ್ಧ ನೌಕಾ ವಸ್ತು ಸಂಗ್ರಹಾಲಯದ ಆವರಣದಲ್ಲಿರುವ ಪರಮವೀರಚಕ್ರ ಮೇಜರ್ ರಾಮ ರಘೋಬಾ ರಾಣೆ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ನೌಕಾನೆಲೆಯ ಕ್ಯಾಪ್ಟನ್ ಸಬ್‌ಮರೀನ್‌ನ ಕ್ಯಾಪ್ಟನ್ ಎಸ್.ಆರ್. ಕೃಷ್ಣ, ಜಿಲ್ಲಾ ಸೈನಿಕ ಮಂಡಳಿಯ ಉಪಾಧ್ಯಕ್ಷ ನಿವೃತ್ತ ಸ್ಕ್ವಾಡ್ ಲೀಡರ್ ಎಸ್.ಎಫ್. ಗಾಂವಕರ, ಕರ್ನಲ್ ಎ.ಕೆ ಮಿಶ್ರಾ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಕ್ಯಾಪ್ಟನ್ ರಮೇಶ ರಾವ್, ಪೌರಾಯುಕ್ತ ಜಗದೀಶ ಹುಲಗಜ್ಜಿ ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ 1971ರ ಯುದ್ಧದಲ್ಲಿ ಪಾಕಿಸ್ತಾನದಿಂದ ಬಾಂಗ್ಲಾ ದೇಶವನ್ನು ವಿಮೋಚನೆ ಮಾಡುವಲ್ಲಿ ಭಾರತೀಯ ಯೋಧರ ಕೊಡುಗೆ ಅಪಾರ. ಡಿಸೆಂಬರ್ 16 ರಂದು ಪಾಕಿಸ್ತಾನದ ಲೆಪ್ಟಿನಂಟ್ ಜನರಲ್ ಶರಣಾಗತಿ ಪತ್ರಕ್ಕೆ ಸಹಿ ಮಾಡಿಕೊಟ್ಟ ದಿನವಾಗಿದ್ದು, ಈ ದಿನ ಎಲ್ಲರು ಹೆಮ್ಮೆಪಡುವ ದಿನವಾಗಿದೆ. ಈ ಯುದ್ಧದಲ್ಲಿ ಭಾಗವಹಿಸಿದ ಯೋಧರಿಗೆ ಇಂದು ಸನ್ಮಾನ ಮಾಡುತ್ತಿರುವುದು ಖುಷಿಯಾಗಿದೆ. ಯೋಧರ ತ್ಯಾಗ ಬಲಿದಾನ ಯವ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ ಎಂದರು.

300x250 AD

ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್ ಮಾತನಾಡಿ ಸಾವಿರಾರಾರು ಯೋಧರು ದೇಶಕ್ಕಾಗಿ ತಮ್ಮ ಜೀವವನ್ನೇ ಬಲಿದಾನ ಮಾಡಿದ್ದಾರೆ. ಅವರ ತ್ಯಾಗ, ಧೈರ್ಯ, ಶೌರ್ಯವನ್ನು ನಾವು ಸ್ಮರಿಸಬೇಕು ಎಂದರು.
ಜಿಲ್ಲಾ ಸೈನಿಕ ಮಂಡಳಿಯ ಉಪಾಧ್ಯಕ್ಷ ನಿವೃತ್ತ ಸ್ಕ್ವಾಡ್ ಲೀಡರ್ ಎಸ್.ಎಫ್ ಗಾಂವಕರ ಮಾತನಾಡಿ, 1971 ರ ಯುದ್ದದಲ್ಲಿ ಪಾಕಿಸ್ತಾನದ ವಿರುದ್ದ ನಿರ್ಣಾಯಕ ವಿಜಯದ ಪ್ರಯುಕ್ತ ವಿಜಯ ದಿವಸ ಆಚರಣೆ ಮಾಡಲಾಗುತ್ತಿದೆ ಈ ಯುದ್ದದಲ್ಲಿ 90 ಸಾವಿರ ಯೋಧರು ಶರಣರಾದರು. ರಾಷ್ಟ್ರದ ಗಡಿ ಪ್ರದೇಶದಲ್ಲಿ ಕ್ಲಿಷ್ಟಕರವಾದ ಸಂದರ್ಭದಲ್ಲೂ ದಿನದ 24 ಗಂಟೆ ದೇಶ ಸೇವೆ ಮಾಡುತ್ತಿರುವ ಯೋಧರ ತ್ಯಾಗ ಬಲಿದಾನದಿಂದ ನಾವೆಲ್ಲರೂ ಸಮೃದ್ಧ ಜೀವನ ನಡೆಸಲು ಸಾಧ್ಯವಾಗಿದೆ. ಅಂತಹ ವೀರ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಬೇಕು ಹಾಗೂ ವೀರ ಸೇನಾನಿಗಳ ಕಷ್ಟಕ್ಕೆ ಎಲ್ಲರೂ ಸ್ಪಂದಿಸಬೇಕು ಎಂದರು.
ನೌಕಾನೆಲೆಯ ಕ್ಯಾಪ್ಟನ್ ಸಬ್‌ಮರೀನ್‌ನ ಕ್ಯಾಪ್ಟನ್ ಎಸ್.ಆರ್. ಕೃಷ್ಣ, ಮಾತನಾಡಿ, ಸೇನೆ ಸೇರಲು ಬಯಸುವ ಯುವಜನತೆಗೆ ಅದರಲ್ಲೂ ನೌಕಾದಳದಲ್ಲಿ ವಿಫುಲ ಅವಕಾಶಗಳಿದ್ದು, ಅದಕ್ಕೆ ಬೇಕಾದ ಪೂರ್ವ ಸಿದ್ದತೆ ಮಾಡಿಕೊಂಡಲ್ಲಿ ದೇಶ ಸೇವೆ ಸಲ್ಲಿಸಲು ಅವಕಾಶಗಳು ಸಿಗಲಿವೆ ಎಂದರು.
ಇದೇ ಸಂದರ್ಭದಲ್ಲಿಯುದ್ದದಲ್ಲಿ ಬಲಿದಾನಗೈದ ಯೋಧರ ಅವಲಂಭಿತರಿಗೆ ಮತ್ತು ಯುದ್ಧದಲ್ಲಿ ಪಾಲ್ಗೊಂಡ ಯೋಧರಿಗೆ ಸನ್ಮಾನ ಮಾಡಲಾಯಿತು ಹಾಗೂ ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಲಾಯಿತು.
ಐಎನ್‌ಎಸ್ ಕದಂಬ ನೌಕಾನೆಲೆಯ ಬ್ಯಾಂಡ್ ಸಿಬ್ಬಂದಿಗಳ ನೇತೃತ್ವದ ತಂಡ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಎನ್‌ಸಿಸಿ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top