ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವಾಸ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಠ್ಠಳ್ಳಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಲಾ 3ಲಕ್ಷ 52ಸಾವಿರ ರೂ ವೆಚ್ಚದಲ್ಲಿ ಕಾಂಪೌಂಡ ನಿರ್ಮಿಸಲಾಗಿದ್ದು ಶಾಲೆಗೆ ಭದ್ರತೆಗೆ ಅನುಕೂಲವಾಗಿದೆ.
ಕಾಂಪೌಂಡ್ ನಿರ್ಮಾಣದಿಂದಾಗಿ ಶಾಲೆಯ ಭದ್ರತೆಯ ಜೊತೆಗೆ ಶಾಲೆಯ ಆಸ್ತಿಯ ಅತಿಕ್ರಮಣಕ್ಕೆ ಕಡಿವಾಣ ಹಾಕಲಾಗಿದೆ. ಶಾಲೆಯಲ್ಲಿ ಕೈತೋಟ ಹಾಗೂ ಆವರಣವನ್ನು ಸುಂದರಗೊಳಿಸುವಲ್ಲಿ ಸಹಾಯಕವಾಗಿದೆ.
ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನರೇಗಾ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ, ಕಾಂಪೌಂಡ್, ಅಡುಗೆ ಕೋಣೆ, ಮಳೆ ನೀರಿನ ಕೊಯ್ಲು ಮುಂತಾದ ಕಾಮಗಾರಿಗಳನ್ನು ಕೈಗೊಂಡು ಶಾಲೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಇದರ ಸಂಪೂರ್ಣ ಸದುಪಯೋಗವನ್ನು ಸರ್ಕಾರಿ ಶಾಲೆಗಳು ಪಡೆಯಬೇಕು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯ್ಕ ತಿಳಿಸಿದರು.