ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲಿದ್ದು, ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ವೆಬ್‌ಸೈಟ್ https://sevasindhugs.karnataka.gov.inನಲ್ಲಿ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು 2023 ರಲ್ಲಿ ಹಾಗೂ 2024 ಪದವಿ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾಗಿ, ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವ- ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವ್ಯಾಸಂಗ ಮುಂದುವರೆಸದೆ ಇರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷ ವಾಸವಾಗಿರವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಅರ್ಹತೆ ಹೊಂದಿರುವವರಿಗೆ ಫಲಿತಾಂಶದ ದಿನಾಂಕದಿಂದ 180 ದಿನಗಳ ನಂತರ ಪದವಿಧರರಿಗೆ ಪ್ರತಿ ತಿಂಗಳು ರೂ.3,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1,500 ಗಳನ್ನು ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭ್ಯತೆ ನೀಡಲಾಗುತ್ತದೆ. ಮೊದಲ ಕಂತಿನ ಹಣ ಪಾವತಿಯಾದ ನಂತರ ಪ್ರತಿ ತಿಂಗಳು 25 ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದ್ದು, ಸೇವಾ ಸಿಂಧು ಪೋರ್ಟಲ್‌ನಲ್ಲಿ ಉದ್ಯೋಗಿ ಅಥವಾ ನಿರುದ್ಯೋಗಿ ಎನ್ನುವ ಕುರಿತು ಸ್ವಯಂ ಘೋಷಣೆ ಮಾಡಿ ಸ್ವೀಕೃತಿ ಪಡೆಯುವುದು ಅಗತ್ಯವಾಗಿದೆ.
ಈ ಯೋಜನನೆಯಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ಅರ್ಜಿ ಸ್ಥಿತಿಯನ್ನು ಪರಿಶೀಲಿಸಿಕೊಂಡು ರಹವಾಸಿ ಪರಿಶೀಲನೆ ಬಾಕಿ ಇದ್ದಲ್ಲಿ ಮೂಲ ದಾಖಲೆಗಳೊಂದಿಗೆ ಸಂಬಂಧಿತ ಕಚೇರಿಗೆ ಭೇಟಿ ನೀಡಿ ರಹವಾಸಿ ಪರಿಶೀಲಿಸಿ ದೃಢೀಕರಿಸಿಕೊಳ್ಳಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ ದೂರವಾಣಿ ಸಂಖ್ಯೆ: Tel:+9108382226386ಅಥವಾ ಯುವನಿಧಿ ಸಹಾಯವಾಣಿ ಸಂಖ್ಯೆ:Tel:+9118005997154 ಹಾಗೂ Tel:+9118005999918 ನ್ನು ಸಂಪರ್ಕಿಸುವAತೆ ಜಿಲ್ಲಾಧಿಕಾರಿ ಕೆ. ಲಕ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.