ದಾಂಡೇಲಿ : ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಆಶ್ರಯದಲ್ಲಿ ಕುಳಗಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜೋತ್ಸವ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಶ್ರದ್ದಾಭಕ್ತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಗುರುಸ್ವಾಮಿ ಮೋಹನ ಸನದಿಯವರು ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ಹಳಿಯಾಳ ರಸ್ತೆಯ ಶ್ರೀ ಗಜಾನನ ಯುವಕ ಮಂಡಳದ ಸಹಕಾರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಅಡುಗೆ ತಯಾರಿಕೆಯಿಂದ ಹಿಡಿದು ವಿತರಿಸುವ ಕಾರ್ಯವನ್ನು ಅತ್ಯಂತ ಭಕ್ತಿಯಿಂದ ನಿರ್ವಹಿಸಿದರು.
ತಹಶೀಲ್ದಾರ್ ಶೈಲೇಶ ಪರಮಾನಂದ ಮತ್ತು ಪೌರಾಯುಕ್ತರಾದ ಆರ್.ಎಸ್.ಪವಾರ್ ಹಾಗೂ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ಅನ್ನಪ್ರಸಾದವನ್ನು ಬಡಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು.
ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷರಾದ ಟಿ.ಆರ್. ಚಂದ್ರಶೇಖರ್, ಉಪಾಧ್ಯಕ್ಷರಾದ ಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಎಸ್.ಸೋಮಕುಮಾರ್, ಖಜಾಂಚಿ ವಿಶ್ವನಾಥ ಶೆಟ್ಟಿ, ಸಹ ಕಾರ್ಯದರ್ಶಿ ಅನಿಲ್ ದಂಡಗಲ್, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಅಯ್ಯಪ್ಪ ಭಕ್ತವೃಂದ ಹಾಗೂ ಭಕ್ತಾಭಿಮಾನಿಗಳು ಕಾರ್ಯಕ್ರಮದ ಯಶಸ್ವಿಗಾಗಿ ಅವಿರತ ಶ್ರಮಿಸಿದ್ದರು. ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.