Slide
Slide
Slide
previous arrow
next arrow

ವಾರ್ಷಿಕ ಸ್ನೇಹ ಸಮ್ಮೇಳನ: ಗ್ರಾ.ಪಂ.ಸದಸ್ಯನಿಂದ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

300x250 AD

ಹೊನ್ನಾವರ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿದೆ.ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ಪಾಲಕರು ಇಂದು ಮಕ್ಕಳ ಸುರಕ್ಷತೆಯ ಕುರಿತು ಕಾಳಜಿ ವಹಿಸುವ ಅಗತ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಹೇಳಿದರು.

ತಾಲೂಕಿನ ವಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ದೇವರ ಬಗ್ಗೆ, ಗುರು ಹಿರಿಯರ ಬಗ್ಗೆ ಭಕ್ತಿ ಇರುವ ರೀತಿ ನೋಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಾಲೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು. ಪಾಲಕರು ತಮ್ಮ ಮಕ್ಕಳ ಬಗ್ಗೆ ಗಮನ ಹರಿಸಿ ಅವರ ಭವಿಷ್ಯ ಉಜ್ವಲಗೊಳಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಪಂಚಾಯತಿಯಿಂದ ಹೆಚ್ಚಿನ ಸೌಲಭ್ಯಗಳನ್ನು ಶಾಲೆಗೆ ನೀಡಲು ಪ್ರಯತ್ನಿಸಲಾಗುವುದು ಎಂದರು. ಗ್ರಾ.ಪಂ.ಸದಸ್ಯ ಗೋವಿಂದ ಗೌಡ ಮಾತನಾಡಿ, ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಕ್ಕಳ ಪ್ರತಿಭೆ ಪ್ರದರ್ಶನಗೊಳಿಸುವ ವೇದಿಕೆಯಾಗಿದೆ. ಮಕ್ಕಳು ಟಿವಿ ಮತ್ತು ಮೊಬೈಲ್ ಫೋನ್‌ಗಳಿಂದ ದುರವಿದ್ದು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದರು.

ಗ್ರಾ.ಪಂ.ಉಪಾಧ್ಯಕ್ಷ ಗಣಪತಿ ಭಾಗ್ವತ, ಸದಸ್ಯೆ ರೂಪಾ ಪಟಗಾರ, ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಬಿಆರ್ಸಿ ಸಮನ್ವಯಾಧಿಕಾರಿ ವಿನಾಯಕ ಅವಧಾನಿ, ಸಿಆರ್‌ಪಿ ಈಶ್ವರ ಭಟ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಈರು ಗೌಡ, ಉಪಾಧ್ಯಕ್ಷೆ ಸೀಮಾ ಭಟ್, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪಿ.ಕೆ.ಹೆಗಡೆ ಹಾಗೂ ಸದಸ್ಯರು ಇದ್ದರು. ಮುಖ್ಯಾಧ್ಯಾಪಕ ಶಂಕರ ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ಮಮತಾ ಹೆಗಡೆ ವರದಿ ವಾಚಿಸಿದರು. ಶಿಕ್ಷಕ ಜಿ..ಕೆ.ಹೆಗಡೆ ವಂದಿಸಿದರು. ಶಿಕ್ಷಕ ದೇವರು ಭಟ್ಟ ನಿರ್ವಹಿಸಿದರು. ನಂತರ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು.

300x250 AD


ಸ್ಕೂಲ್ ಬ್ಯಾಗ್ ವಿತರಿಸಿದ ಗೋವಿಂದ ಗೌಡ :

ವಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಸ್ಥಳೀಯ ಗ್ರಾ. ಪಂ. ಸದಸ್ಯ ಗೋವಿಂದ ಗೌಡ ಸ್ಕೂಲ್ ಬ್ಯಾಗ್ ಉಚಿತವಾಗಿ ವಿತರಿಸಿದರು. ನಿಕಟಪೂರ್ವ ಗ್ರಾ. ಪಂ. ಅಧ್ಯಕ್ಷರು, ಹಾಲಿ ಸದಸ್ಯರಾಗಿರುವ ಗೋವಿಂದ ಗೌಡ ಸ್ಥಳೀಯವಾಗಿ ವಿದ್ಯಾರ್ಥಿಗಳಿಗೆ, ಶಿಕ್ಷಣ ಕ್ಷೇತ್ರಕ್ಕೆ ಸಹಾಯ ಹಸ್ತ ಚಾತುತ್ತಲೆ ಬಂದಿದ್ದಾರೆ. ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಯಾರಿಗೆ ಏನೇ ಸಮಸ್ಯೆ ಆದರೂ ಅವರ ನೆರವಿಗೆ ಬರುವ ಸಹನುಭೂತಿ ಗುಣ ಹೊಂದಿರುವ ಇವರು ಸಾಮಾಜಿಕವಾಗಿ ಗುರುತಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಕೊಳ್ಳುತ್ತಿದ್ದಾರೆ.

Share This
300x250 AD
300x250 AD
300x250 AD
Back to top