ಹುಬ್ಬಳ್ಳಿ: ಬೆಂಗಳೂರು ಅರಮನೆ ಮೈದಾನದಲ್ಲಿ ಡಿ. 27 ರಿಂದ 29ರ ವರೆಗೆ ನಡೆಯುವ ಮೂರನೇ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಿರುವ “ಹವ್ಯಕ ಸಾಧಕ ರತ್ನ” ಪ್ರಶಸ್ತಿಗೆ ಭರತನಾಟ್ಯ ಕಲಾವಿದೆ ಡಾ. ಸಹನಾ ಭಟ್ ಆಯ್ಕೆಯಾಗಿದ್ದಾರೆ.
ಡಿ. 27ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಸುಮಾರು 30 ವರ್ಷಗಳಿಂದ ಭರತನಾಟ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತ ಬಂದಿರುವ ಸಹನಾ ಭಟ್ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿರುತ್ತಾರೆ. ದೇಶಾದ್ಯಂತ ಅನೇಕ ನೃತ್ಯ ಪ್ರದರ್ಶನಗಳನ್ನು ನೀಡಿ ಜನ ಮೆಚ್ಚುಗೆ ಪಡೆದಿರುತ್ತಾರೆ. ದುಬೈ, ಕತಾರ್, ಬಹರೇನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿ ತಮ್ಮ ಕಲಾ ಪ್ರೌಢಿಮೆಯನ್ನು ಮೆರೆದಿರುತ್ತಾರೆ. ಅನೇಕ ನೃತ್ಯ ರೂಪಕಗಳನ್ನು ನಿರ್ದೇಶಿಸಿರುವ ಇವರು ಪ್ರಸ್ತುತ ಇಲ್ಲಿಯ ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.