ಕಾರವಾರ: ಕಾರವಾರ ತಾಲೂಕಿನ ಗೋಟೆಗಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳ್ನಿ (ಪ.ಜಾತಿಗೆ ಮೀಸಲು) ಮತ್ತು ಕುಮಟಾ ತಾಲೂಕಿನ ಸೊಪ್ಪಿನಹೊಸಳ್ಳಿ (ಸಾಮಾನ್ಯ ವರ್ಗಕ್ಕೆ ಮೀಸಲು) ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಆಯಾ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.
ಅಭ್ಯರ್ಥಿಯು ದ್ವಿತೀಯ ಪಿಯುಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ರ್ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು. ಗ್ರಾಮ ಪಂಚಾಯತ ವ್ಯಾಪ್ತಿಯ ನಿವಾಸಿಯಾಗಿದ್ದು, ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಗ್ಗೆ ಸಂಬAಧಪಟ್ಟ ರಹವಾಸಿ ಪ್ರಮಾಣ ಪತ್ರವನ್ನು ತಹಶೀಲ್ದಾರರವರಿಂದ ಪಡೆದು ಲಗತ್ತಿಸಿರಬೇಕು. ನಿಗದಿಪಡಿಸಲಾದ ಮೀಸಲಾತಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರ ನೀಡಿದ ದೃಢೀಕರಣ ಪತ್ರ ಲಗತ್ತಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಟಿ.ಸಿ, ಮೀಸಲಾತಿ ಪ್ರಮಾಣಪತ್ರ, ಅಂಗವಿಕಲತೆ (ಇದ್ದಲ್ಲಿ) ದೃಢೀಕರಣ ಪತ್ರ ಹಾಗೂ ಇನ್ನಿತರ ವಿದ್ಯಾರ್ಹತೆ (ಇದ್ದಲ್ಲಿ) ದಾಖಲೆ ಇತ್ಯಾದಿಗಳೊಂದಿಗೆ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿಬಅಧಿಕಾರಿಗಳಿಗೆ ಸಲ್ಲಿಸಬೇಕು.
ವಯೋಮಿತಿ, ಮೀಸಲಾತಿ, ಸಮತಳ ಮೀಸಲಾತಿ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ(ಆಡಳಿತ) ಹಾಗೂ ಸದಸ್ಯ ಕಾರ್ಯದರ್ಶಿ ಗ್ರಾ.ಪಂ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರ ನೇಮಕಾತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.