ದಾಂಡೇಲಿ : ಮಾಜಿ ಪ್ರಧಾನಿ ಹಾಗೂ ದೇಶದ ಅಗ್ರ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೂರ ದೃಷ್ಟಿಯುಳ್ಳ ನಾಯಕರಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞರಾಗಿ ದೇಶ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದವರು. ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕರಾದ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಅವರು ಶುಕ್ರವಾರ ಮಾಧ್ಯಮಕ್ಕೆ ನೀಡಿದ ಶೋಕ ಸಂದೇಶ ಪತ್ರದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. ದೇಶದ ಅತ್ಯಂತ ನಿರ್ಣಾಯಕ ಕ್ಷಣಗಳಲ್ಲಿ ಪ್ರಧಾನಿಯಾಗಿ ಮತ್ತು ಆರ್ಥಿಕ ತಜ್ಞರಾಗಿ ಸಿಂಗ್ ಅವರು ಕೈಗೊಂಡ ನಿರ್ಧಾರಗಳು ಹಾಗೂ ಅವರ ದೂರದೃಷ್ಟಿಯ ಆಲೋಚನೆಗಳು ಶ್ಲಾಘನೀಯ. ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.
ಡಾ.ಮನಮೋಹನ್ ಸಿಂಗ್ ಅವರ ಅಗಲಿಕೆಯಿಂದ ಉಂಟಾಗಿರುವ ಶೂನ್ಯವನ್ನು ಭರ್ತಿಮಾಡುವುದು ಅಸಾಧ್ಯ.ಭಗವಂತನು ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಆರ್.ವಿ. ದೇಶಪಾಂಡೆ ಪ್ರಾರ್ಥಿಸಿದ್ದಾರೆ.