ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು , ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರು ಅಮರ ಶಿಲ್ಪಿ ಜಕಣಾಚಾರಿ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ, ವಿಶ್ವಕರ್ಮ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರಾಘವೇಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.