ಶಿರಸಿ: ಡಿ.31ರಂದು ವಯೋನಿವೃತ್ತಿ ಹೊಂದಿದ ತಾಲೂಕಿನ ದೇವರಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಗಿರಿಜಾ ಭಟ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಎಸ್ಡಿಎಮ್ಸಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಊರಿನ ನಾಗರಿಕರು, ವಿದ್ಯಾರ್ಥಿಗಳೆಲ್ಲ ಸೇರಿ ಅವಿಸ್ಮರಣೀಯವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ದ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದ ಮೂಲಕ ಗುರುಮಾತೆಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದ ಆಧ್ಯಕ್ಷತೆಯನ್ನು ಎಸ್ಡಿಎಮ್ಸಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಪಟಗಾರ ವಹಿಸಿದ್ದರು. ಸ್ಥಳೀಯ ಪ್ರತಿನಿಧಿಗಳಾದ ಪ್ರಕಾಶ ಹೆಗಡೆ, ಕಿರಣ್ ಭಟ್, ಶ್ರೀಮತಿ ಸುನಂದಾ ತಳವಾರು ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗರಾಜ್ ನಾಯ್ಕ್ ಇಲಾಖೆಯ ವತಿಯಿಂದ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದಿಂದ, ಭೈರುಂಬೆ ಕ್ಲಸ್ಟರ್ ವತಿಯಿಂದ, ರಾಜ್ಯ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.