ಕಾರವಾರ: ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ ವತಿಯಿಂದ ಗುರುವಾರ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 400 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 24 ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಸಂದರ್ಶನ ನೀಡಿದರು.
ಉದ್ಯೋಗಮೇಳದಲ್ಲಿ ಭಾಗವಹಿಸಿದ್ದ 24 ಕಂಪನಿಗಳು ಒಟ್ಟು 1630 ಉದ್ಯೋಗಗಳ ಬೇಡಿಕೆ ನೀಡಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ ಮತ್ತು ಸ್ನಾತಕೋತ್ತರ ಪಧವೀಧರ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಸಲ್ಲಿರುವ ದಾಖಲೆಗಳನ್ನು ಕಂಪನಿಗಳು ಪರಿಶೀಲನೆ ಮಾಡಿದ ನಂತರ ಅವರಿಗೆ ಸೂಕ್ತ ಉದ್ಯೋಗದ ಕುರಿತಂತೆ ನೆಮಕಾತಿ ಪತ್ರ ದೊರೆಯಲಿದೆ.
ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ನೋಂದಣಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿಯ ಕುರಿತು ತರಬೇತಿ ವ್ಯವಸ್ಥೆಯನ್ನು ಮಾಡಲಾಗಿತ್ತು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಟಿ ನಾಯ್ಕ್ ಅವರ ನೇತೃತ್ವದಲ್ಲಿ ಉದ್ಯೋಗ ಮೇಳಕ್ಕೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.