ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೃಷಿಕ ಸಮಾಜದ ನೂತನ ಕಾರ್ಯಕಾರಿ ಸಮಿತಿಗೆ ಕಾರವಾರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಹಾಗು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು.
2025-26 ರಿಂದ 2029-30ರ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನಾರಾಯಣ ಗೋವಿಂದ ಹೆಗಡೆ ಅಂಕೋಲ, ಉಪಾಧ್ಯಕ್ಷರಾಗಿ ನಾಗರಾಜ ಮಾದೇವಪ್ಪ ಬೆಣ್ಣೆ ಮುಂಡಗೋಡ, ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ರಾಮ ನಾಯ್ಕ ಸಿದ್ದಾಪುರ, ಖಜಾಂಚಿಯಾಗಿ ಮಲ್ಲಾರಿ ವಿರೂಪಾಕ್ಷ ಘಾಡಿ ಹಳಿಯಾಳ, ಹಾಗು ರಾಜ್ಯ ಪ್ರತಿನಿಧಿ ಸ್ಥಾನಕ್ಕೆ ರಾಮಚಂದ್ರ ದೇವರು ಹೆಗಡೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.