Slide
Slide
Slide
previous arrow
next arrow

ದಾಂಡೇಲಿಯಲ್ಲಿ ರಾಷ್ಟ್ರೀಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆ

300x250 AD

ದಾಂಡೇಲಿ : ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ್ ಸ್ವತಂತ್ರ ಸ್ವಾವಲಂಬಿಗಳಾಗಿ ಬದುಕು ನಡೆಸಲು ಬೀದಿ ಬದಿ ವ್ಯಾಪಾರ ಅನೇಕರ ಬಾಳಿಗೆ ಆಶಾಕಿರಣವಾಗಿದೆ. ಶ್ರಮದ ಬದುಕಿನಲ್ಲಿ ಸಾರ್ಥಕತೆ ಇದೆ. ಅಂತಹ ಸಾರ್ಥಕತೆಯ ಶ್ರಮ ಜೀವನ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಗರ ಸಭೆ ಸದಾ ಮುಂದಿದೆ. ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರ ನಡೆಸುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನೀಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ.ಸಿ.ಈ.ರಂಗಸ್ವಾಮಿ ಅವರು ಬೀದಿಬದಿ ವ್ಯಾಪಾರಿಗಳನ್ನು ಸಂಘಟಿಸಿ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಸಂಘಟನೆ ರಚನೆಯಾಗಿದೆ. ಸ್ಥಳೀಯ ಸಂಸ್ಥೆಗಳ ನಿಯಮಾವಳಿಯನ್ನು ಪಾಲಿಸಿ ಬೀದಿಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ನಡೆಸುತ್ತಾ ಬಂದಿದ್ದಾರೆ. ಸ್ಥಳೀಯ ಸಂಸ್ಥೆಗಳು ಸ್ವತಂತ್ರ ಸ್ವಾವಲಂಬಿಗಳಾಗಿ ಬದುಕು ನಡೆಸುವ ಬೀದಿ ಬದಿ ವ್ಯಾಪಾರಿಗಳಿಗೆ ವಿಶೇಷ ಪ್ರೋತ್ಸಾಹವನ್ನು ನೀಡುವ‌ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ಮತ್ತಷ್ಟು ಆರ್ಥಿಕ ಸದೃಢ ರನ್ನಾಗಿಸಲು ಪ್ರೇರಣೆಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಸ್ಐ ಕಿರಣ್ ಪಾಟೀಲ್, ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲೆಯ ಉಸ್ತುವಾರಿಯಾದ ಮಣಿ ಗೌಂಡರ್ ಹಾಗೂ ಸಂಘದ ಜಿಲ್ಲಾಧ್ಯಕ್ಷರಾದ ಅಬ್ಬಾಸ್ ಮುಲ್ಲಾ, ಕಾರವಾರ ತಾಲೂಕು ಅಧ್ಯಕ್ಷರಾದ ಪಕೀರಪ್ಪ ಭಂಡಾರಿ, ನಗರಸಭೆ ವ್ಯವಸ್ಥಾಪಕರಾದ ಪರಶುರಾಮ ಶಿಂದೆ, ಎಎಸ್ಐ ಮೆಹಬೂಬು‌ ನಿಂಬುವಾಲೆ, ಹಳೆ ದಾಂಡೇಲಿಯ ಸರಕಾರಿ ಉರ್ದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ರೆಹಮಾನ್, ನಗರ ಸಭೆಯ ಸದಸ್ಯರಾದ ಸರಸ್ವತಿ ರಜಪೂತ ಮತ್ತು ಪ್ರೀತಿ‌ ನಾಯರ್, ಮಹಿಳಾ ಉದ್ಯಮಿ ಕೀರ್ತಿ ಅರುಣಾದ್ರಿ ರಾವ್, ನ್ಯಾಯವಾದಿ ರಾಜಶೇಖರ ಐ.ಎಚ್, ಕಾಂಗ್ರೆಸ್ ಮುಖಂಡರಾದ ದಾದಾಪೀರ್ ನದೀಮುಲ್ಲಾ, ಪ್ರಭುದಾಸ ಯೆನಿಬೇರಾ, ರವಿ ಚೌವ್ಹಾಣ್, ಆದಿಜಾಂಬವಂತ ಸಂಘಟನೆಯ ಅಧ್ಯಕ್ಷರಾದ ಚಂದ್ರಕಾಂತ ನಡಿಗೇರ, ಬಿಜೆಪಿ ಮುಖಂಡರಾದ ರಿಯಾಜ್ ಖಾನ್, ಯುವ ಮುಖಂಡರಾದ ಶೇರಖಾನ್ ಇಬ್ರಾಹಿಂ‌ ಲಿಂಬುವಾಲೆ, ಸಲೀಂ ಮುಕಾಶಿ, ಸಂಡೆ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಪರಮೇಶ ಕಲಾಲ್ ಮತಲಾದವರು ಭಾಗವಹಿಸಿ ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

300x250 AD

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸಿದ 30ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸಲಾಯಿತು. ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಲಾಯ್ತು. ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಮಹಿಳಾ ಘಟಕದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಬೀದಿ ಬದಿ ವ್ಯಾಪಾರಿಗಳ ಸಂಘಟನೆಯ ತಾಲೂಕು ಅಧ್ಯಕ್ಷರಾದ ಸಿಲೇಮಾನ್ ಸೈಪುದ್ದೀನ್ ಶೇಖ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಗೌರೀಶ್ ಚಂದ್ರಕಾಂತ್ ದೇಸಾಯಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ವಿನೋದ್ ದತ್ತಾತ್ರೇಯ ಪೋರೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಬೀದಿ ಬದಿ ವ್ಯಾಪಾರಿಗಳ ಸಂಘಟನೆಯ ತಾಲೂಕು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರಮಿಸಿದ್ದರು.

Share This
300x250 AD
300x250 AD
300x250 AD
Back to top