Slide
Slide
Slide
previous arrow
next arrow

ಸಿರಿಧಾನ್ಯದಿಂದ ಆರೋಗ್ಯ : ಸಾಜಿದ್ ಮುಲ್ಲಾ

300x250 AD

ಕಾರವಾರ,: ದೈನಂದಿನ ಆಹಾರ ಸೇವನೆಯಲ್ಲಿ ಸಿರಿಧಾನ್ಯಗಳನ್ನು ಬಳಸುವುದರಿಂದ ಹಲವು ರೋಗಗಳಿಂದ ಮುಕ್ತವಾಗಿ ಆರೋಗ್ಯಯುತ ಜೀವನ ನಡೆಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.
ಅವರು ಮಂಗಳವಾರ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉತ್ತರ ಕನ್ನಡ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಿರಿಧಾನ್ಯಗಳು ಅತ್ಯಧಿಕ ಪೌಷ್ಠಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ನೀಡುತ್ತವೆ. ಇವುಗಳ ನಿಯಮಿತ ಬಳಕೆಯಿಂದ ರೋಗಗಳು ಬಾರದಂತೆ ಉತ್ತಮ ಆರೋಗ್ಯವನ್ನು ಹೊಂದಬಹುದಾಗಿದ್ದು, ಪ್ರಸ್ತುತ ಆಹಾರದಲ್ಲಿ ಹಲವು ಬಗೆಯ ಕಲಬೆರಕೆಗಳ ಕುರಿತು ವರದಿಯಾಗುತ್ತಿದ್ದು, ಸಿರಿಧಾನ್ಯಕ್ಕಿಂತ ಶ್ರೇಷ್ಠ ಆಹಾÀರವಿಲ್ಲ, ಆದ್ದರಿಂದ ಆಹಾರದಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಬೇಕು ಎಂದರು.
ಮಾಲಾದೇವಿ ಕ್ರೀಡಾಂಗಣದಿAದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ 300 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಕರಪತ್ರಗಳ ಮೂಲಕ ಸಾರ್ವಜನಿಕರಿಗೆ ಸಿರಿಧಾನ್ಯಗಳ ಮಹತ್ವವನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕರಿ ಸೋಮಶೇಖರ್ ಮೇಸ್ತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಮೋಹನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ್ , ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ಹಾಗೂ ಕೃಷಿ ಇಲಾಖೆಯ ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿಗಳು , ವಿವಿಧ ಸಂಘ ಸಂಸ್ಥೆಗಳು ಪದಾಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top