ದಾಂಡೇಲಿ : ನಗರ ಪೊಲೀಸ್ ಠಾಣೆಯಲ್ಲಿ ನಗರದ ವಿವಿಧ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳ ಸಿಬ್ಬಂದಿಗಳ ಜೊತೆ ಡಿವೈಎಸ್ಪಿ ಶಿವಾನಂದ ಮದರಖಂಡಿ ನೇತೃತ್ವದಲ್ಲಿ ಮಂಗಳವಾರ ಸಭೆ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಮದರಖಂಡಿ ಅವರು ಮೈಕ್ರೋ ಫೈನಾನ್ಸ್ ಅಧಿಕಾರಿಗಳಾಗಲಿ, ಸಿಬ್ಬಂದಿಗಳಾಗಲಿ ದಬ್ಬಾಳಿಕೆ ಮತ್ತು ಒತ್ತಾಯಪೂರ್ವಕವಾಗಿ ಯಾರ ಬಳಿಯು ಸಾಲ ವಸೂಲಾತಿ ಮಾಡಬಾರದು. ಸಾಲ ನೀಡುವ ಸಂದರ್ಭದಲ್ಲಿ ಸಾಲದ ಬಗ್ಗೆ ಹಾಗೂ ಮರುಪಾವತಿಯ ಬಗ್ಗೆ ಸರಿಯಾದ ತಿಳುವಳಿಕೆಯನ್ನು ನೀಡಬೇಕು. ಬೆದರಿಕೆ ಹಾಗೂ ಕಿರುಕುಳ ಮಾಡಿ ಸಾಲ ವಸೂಲಾತಿಯನ್ನು ಮಾಡಬಾರದಾಗಿ ಸೂಚನೆ ನೀಡಿದರು. ಮೈಕ್ರೋ ಫೈನಾನ್ಸ್ ನವರಿಂದ ಸಾರ್ವಜನಿಕರ ಮೇಲೆ ಕಿರುಕುಳ, ದಬ್ಬಾಳಿಕೆಗೆ ನಡೆದಲ್ಲಿ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಸ್ಐ ಕಿರಣ್ ಪಾಟೀಲ್ ಉಪಸ್ಥಿತರಿದ್ದು ಅಗತ್ಯ ಮಾಹಿತಿಯನ್ನು ನೀಡಿದರು.