ಸಿದ್ದಾಪುರ: ತಾಲೂಕಿನ ಶಿರಳಗಿ ಗ್ರಾಪಂನ ಗ್ರಾಮ ಸಭೆಗೆ ಕೆಲವು ಇಲಾಖೆಯ ಅಧಿಕಾರಿಗಳು ಸಭೆಗೆ ಬಾರದೇ ಇರುವುದರಿಂದ ಸಭೆಗೆ ಆಗಮಿಸಿದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ಪರಿಣಾಮ ಗ್ರಾಮ ಸಭೆಯನ್ನು ರದ್ದುಪಡಿಸಿ ಮುಂದೂಡಿದ ಘಟನೆ ಗುರುವಾರ ನಡೆದಿದೆ.
ಆದರೆ ಸಭೆಯ ಪ್ರಾರಂಭದಲ್ಲಿ ಇತ್ತೀಚೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ ಅವರನ್ನು ಗ್ರಾಪಂ ಹಾಗೂ ಊರನಾಗರಿಕರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಾರುತಿ ನಾಯ್ಕ, ಉಪಾದ್ಯಕ್ಷೆ ಮಹಾಲಕ್ಷ್ಮಿ ನಾಯ್ಕ ಹಾಗೂ ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿಗಳಿದ್ದರು.