ಸಿದ್ದಾಪುರ: ಪಟ್ಟಣ ಮತ್ತು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯವಾಗಿ ರಸ್ತೆ, ಕುಡಿಯುವ ನೀರು, ಸಭಾಭವನ, ದೇವಸ್ಥಾನ ಕಾಲುಸಂಕವನ್ನು ನಿರ್ಮಿಸಲು ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾದಲ್ಲಿ ಸ್ಥಳೀಯ ಹಿರಿಯ ಪ್ರಾಥಮಿಕ ಶಾಲೆಯಿಂದ ಮಸೀದಿ ರಸ್ತೆ ಮೂಲಕ ಈಶ್ವರ ದೇವಸ್ಥಾನದವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಂಗಳವಾರ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಯ ಪೂರ್ವದಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದು ಎಲ್ಲ ವರ್ಗದವರಿಗೆ ಅನುಕೂಲಮಾಡಿಕೊಟ್ಟಿದೆ. ಅಭಿವೃದ್ಧಿಗೆ ಯಾವುದೇ ಹಣಕಾಸಿನ ತೊಂದರೆ ಇಲ್ಲ. ಭರವಸೆ ನೀಡಿ ಹೋಗುವುದಿಲ್ಲ. ಅಭಿವೃದ್ಧಿಯನ್ನು ಮಾಡುತ್ತೇವೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಹನುಮಕ್ಕ ಭೋವಿ, ಉಪಾಧ್ಯಕ್ಷ ಸಿದ್ದಾರ್ಥ ಗೌಡರ್, ಸದಸ್ಯರಾದ ಅಶೋಕ ನಾಯ್ಕ, ಅನಂತ ಹೆಗಡೆ, ಶಾಂತಕುಮಾರ ಪಾಟೀಲ್, ಪ್ರೇಮಾ ನಾಯ್ಕ, ಗ್ರಾಪಂ ಸದಸ್ಯರುಗಳು, ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಸೀಮಾ ಹೆಗಡೆ, ಶಶಿಧರ ಗೌಡರ್, ಇಸ್ಮಾಯಿಲ್ ಸಾಬ್, ನೂರ್ರಾಮಿನ್ ಸಾಬ್‌ಗ್ರಾಪಂ ಪಿಡಿಒ ರಾಜೇಶ ನಾಯ್ಕ ಇತರರಿದ್ದರು.