ಶಿರಸಿ: ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅನಂತಮೂರ್ತಿ ಹೆಗಡೆ ವಿರುದ್ಧ ಪೋಲಿಸ್ ಪ್ರಕರಣ ದಾಖಲಾಗಿದೆ.
ಶಿರಸಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅನಂತಮೂರ್ತಿ ಹೆಗಡೆ, ಜನಪ್ರತಿನಿಧಿ ಕಾಯಿದೆ ಅಡಿಯಲ್ಲಿ ಚುನಾಯಿತರಾದ 224 ಶಾಸಕರು ಸುಳ್ಳು ಹೇಳುವರೆಂದು ಮತ್ತು ಅದರಲ್ಲಿ ಅತೀ ಹೆಚ್ಚು ಸುಳ್ಳು ಹೇಳುವ ಶಾಸಕ ಪ್ರಶಸ್ತಿಯನ್ನು ಶಾಸಕ ಭೀಮಣ್ಣ ನಾಯ್ಕರಿಗೆ ನೀಡಬೇಕೆನ್ನುವ ಹೇಳಿಕೆಯನ್ನು ನೀಡಿದ್ದರು. ಇಂತಹ ಹೇಳಿಕೆಗಳು ಶಾಂತಿ ವ್ಯವಸ್ಥೆ ಹಾಳಾಗಲು ಕಾರಣವಾಗುವಂತದ್ದಾಗಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಸಕರ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ.ಆದ್ದರಿಂದ ಅವರ ಮೇಲೆ ಹಾಗು ಅವರ ಬೆಂಬಲಿಗರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಲಾಗಿದೆ.ಈ ಪ್ರಕರಣವನ್ನು ಪಿಎಸ್ಆಯ್ ನಾಗಪ್ಪ ಬಿ. ತನಿಖೆ ನಡೆಸುತ್ತಿದ್ದಾರೆ.