ದಾಂಡೇಲಿ : ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಗಗನ್ ಗೋಪಾಲ ಸಿಂಗ್ ಸುಧೀರ ಸಿಂಗ್ ರಜಪೂತ್ ಆಯ್ಕೆಯಾಗಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಆನ್ಲೈನ್ ಮೂಲಕ ಚುನಾವಣೆ ನಡೆದಿತ್ತು. ಅಧ್ಯಕ್ಷ ಹುದ್ದೆಗೆ ಒಟ್ಟು ನಾಲ್ಕು ಜನ ಸ್ಪರ್ಧಿಸಿದ್ದರು. ಇವರ ಪೈಕಿ 909 ಮತಗಳನ್ನು ಪಡೆದ ಗಗನ್ ಗೋಪಾಲ ಸಿಂಗ್ ಸುಧೀರ ಸಿಂಗ್ ರಜಪೂತ್ ಅವರು ಅತ್ಯಧಿಕ ಮತಗಳನ್ನು ಪಡೆದ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಇವರ ಆಯ್ಕೆಯನ್ನು ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಪ್ರಕಟಿಸಿದೆ.
ಪಕ್ಷದ ನಾಯಕರು ಹಾಗೂ ಮುಖಂಡರು ಮತ್ತು ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಸಮಿತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಗಗನ್ ಗೋಪಾಲ ಸಿಂಗ್ ಸುಧೀರ ಸಿಂಗ್ ರಜಪೂತ್ ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.