ಶಿರಸಿ : ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರಾಕರಿಸಿದ ಧಾರವಾಡ ಉಚ್ಚ ನ್ಯಾಯಾಲಯದ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಸ್ವಾಗತಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಮೊದಲಿನಿಂದಲೂ ಹೇಳಿದಂತೆ ಮುಡಾದಲ್ಲಿ ಯಾವುದೇ ಅವ್ಯವಾರ ನಡೆಯುತ್ತಿಲ್ಲ. ಆದರೂ ಅದರ ಕುರಿತು ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ದೂರುದಾರರು ಸಿಬಿಐ ಗೆ ನೀಡಬೇಕು ಎಂದು ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಅದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಇದರಿಂದ ಜಯ ಸಿಕ್ಕಂತಾಗಿದೆ ಎಂದರು.
ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದ್ದು ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಇದರಿಂದ ಬಿಜೆಪಿ ಪಕ್ಷಕ್ಕೂ ತೀವ್ರ ಹಿನ್ನಡೆ ಯಾಗಿದ್ದು. ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಎಲ್ಲಾ ಷಡ್ಯಂತ್ರಗಳು ವಿಫಲವಾಗಿದ್ದು ಇದು ಸತ್ಯಕ್ಕೆ ಸಿಕ್ಕ ಜಯ ಆಗಿದೆ ಇದನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸ್ವಾಗತಿಸುತ್ತೇನೆ ಎಂದರು.
ಮುಡಾ ಪ್ರಕರಣ ಸಿಬಿಐ ತನಿಖೆ ನೀಡಲು ನಿರಾಕರಣೆ: ಕೋರ್ಟ್ ಆದೇಶ ಸ್ವಾಗತಾರ್ಹ
