ಹೊನ್ನಾವರ : ತಾಲೂಕಿನ ಖರ್ವಾ ಗ್ರಾಮ ಪಂಚಾಯತದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸ್ಥಳೀಯ ವ್ಯಕ್ತಿಯೊಬ್ಬ ಕೆನ್ನೆಯ ಮೇಲೆ ಹೊಡೆದು ಹಲ್ಲೆ ಮಾಡಿರುವ ಬಗ್ಗೆ ಕಳೆದ ಶುಕ್ರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖರ್ವಾ ಗ್ರಾ. ಪಂ. ಸಿಬ್ಬಂದಿ ಖರ್ವಾ ಕೊರೆಯ ನಾರಾಯಣ ಅಮಕೂಸ ಗೌಡ ಇವರು ಗ್ರಾ. ಪಂ. ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗ, ಬೆಳಿಗ್ಗೆ 10.30 ಕ್ಕೆ ತನುಜಕುಮಾರ ಗಣಪತಿ ನಾಯ್ಕ ಇತನು ಕರ ಸಂದಾಯ ರಶೀದಿಯಲ್ಲಿನ ಅಂಶಗಳ ಬಗ್ಗೆ ಮಾತನಾಡುತ್ತಾ ಅವಾಚ್ಯ ಶಬ್ದದಿಂದ ಬೈದು ಕೈಯಿಂದ ಕೆನ್ನೆಯ ಮೇಲೆ ಹೊಡೆದು ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿ ದೈಹಿಕವಾಗಿ ಹೊಡೆದು ಬೆದರಿಕೆ ಹಾಕಿರುತ್ತಾನೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾರಾಯಣ ಅಮಕೂಸ ಗೌಡ ಇವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.