ಕಾರವಾರ: ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಡಿಡಿಯು-ಚಿಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಹಾಗೂ ತಾಲೂಕು ಪಂಚಾಯತ, ಶಿರಸಿ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ. ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳವನ್ನು ಭಾಗವಹಿಸಬಹುದಾಗಿದೆ.
ಈ ಮೇಳದಲ್ಲಿ 30 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಆಧಾರ ಕಾರ್ಡ್, ಇತ್ತೀಚಿನ ಭಾವಚಿತ್ರ ಪ್ರತಿಯೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ Tel:+919481274298, Tel:+919663073233, Tel:+919353060033 ಗೆ ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಉದ್ಯೋಗ ಮೇಳ
