ಕಾರವಾರ: ಜಿಲ್ಲೆಯಲ್ಲಿ 2025 ರ ನೀಟ್ ಪರೀಕ್ಷೆಯ ಆಯೋಜನೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸಭೆಯಲ್ಲಿ ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಾರ್ಗಸೂಚಿಗಳನ್ವಯ ಕಟ್ಟುನಿಟ್ಟಾಗಿ, ಯಾವುದೇ ಲೋಪಗಳಿಗೆ ಆಸ್ಪದ ನಿಡದಂತೆ ಮತ್ತು ಸುಸೂತ್ರವಾಗಿ ನಡೆಸುವ ಕುರಿತಂತೆ ಚರ್ಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಸಹಾಯಕ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್ ಹಾಗೂ ಜಿಲ್ಲಾ ಸಮನ್ವಯ ಸಮಿತಿಯಲ್ಲಿನ ಅಧಿಕಾರಿಗಳು ಉಪಸ್ಥಿತರಿದ್ದರು.