ಯಲ್ಲಾಪುರ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜರುಗುತ್ತಿರುವ ಅರಣ್ಯವಾಸಿಗಳಿಗೆ ಕಾನೂನು ಜಾಗೃತಾ ಜಾಥಾ-೨೦೨೫ ರ ಅಂಗವಾಗಿ ಯಲ್ಲಾಪುರ ತಾಲೂಕಿನ ಕಂಪ್ಲಿ ಮತ್ತು ಹಾಸಣಗಿ ಪಂಚಾಯತಿ ವ್ಯಾಪ್ತಿಯ ಕಾರ್ಯಕ್ರಮವು ಮಂಚಿಕೇರಿಯ ಮಹಾಗಣಪತಿ ದೇವಸ್ಥಾನ ಸಭಾಂಗಣದಲ್ಲಿ ಮಾ.೧೦ ರಂದು ಮುಂಜಾನೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟಗಾರರ ವೇದಿಕೆಯ ತಾಲೂಕಾ ಅಧ್ಯಕ್ಷ ಭೀಮಶಿ ವಾಲ್ಮೀಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಜಾಗೃತಾ ಕಾರ್ಯಕ್ರಮದಲ್ಲಿ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಲಿದ್ದು, ಆಸಕ್ತರು ಆಗಮಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.