ಬೆಂಗಳೂರು: ಬಜೆಟ್ ಮಂಡನೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕೆಳಕಂಡ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
177 ಕೋಟಿ ರೂ. ಮೊತ್ತದಲ್ಲಿ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64 ಅರಿವಳಿಕೆ ಕೇಂದ್ರಗಳ ಸ್ಥಾಪನೆ.
ಗದಗ ಮೆಡಿಕಲ್ ಕಾಲೇಜಿನಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ.
ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಹಾಗೂ 304 ಕೋಟಿ ರೂ. ವೆಚ್ಚದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಸ್ಥಾಪನೆ.
26 ಕೋಟಿ ರೂ. ವೆಚ್ಚದ ಬೆಂಗಳೂರಿನ ನೆಪ್ರೊ-ಯುರಾಲಾಜಿ ಸಂಸ್ಥೆಯ ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಣೆ.
ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ.
ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.
2025-26ನೇ ಸಾಲಿನಲ್ಲಿ ಸಾರ್ವಜನಿಕರಿಗೆ ಸುಧಾರಿತ ಆರೋಗ್ಯ ಸೇವೆಯನ್ನು ಒದಗಿಸಲು ಈ ಕೆಳಕಂಡಂತೆ ಹೊಸ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು.