ಸಿದ್ದಾಪುರ: ಕರ್ನಾಟಕ ಜಾನಪದ ಪರಿಷತ್‌ನ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಮಾ.15ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ.
ವಿಶೇಷ ಆಮಂತ್ರಿತರಾಗಿ ಶಾಸಕ ಭೀಮಣ್ಣ ನಾಯ್ಕ ಪಾಲ್ಗೊಳ್ಳಲಿದ್ದಾರೆ. ಜಾನಪದ ಕಲಾವಿದೆ ಲೀಲಾವತಿ ಶೇಷಗಿರಿ ಕೊಂಡ್ಲಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತನ ಜಿಲ್ಲಾಧ್ಯಕ್ಷ ಡಾ.ವೆಂಕಟೇಶ ನಾಯ್ಕ ಅಧ್ಯಕ್ಷತೆವಹಿಸುವರು. ಹಿರಿಯ ಸಾಹಿತಿ ಸುಬ್ರಾಯ ಮತ್ತಿಹಳ್ಳಿ, ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಜಿ.ನಾಯ್ಕ, ತಾಲೂಕು ಮಾಧ್ಯಮ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಕನ್ನೇಶ ಕೋಲಸಿರ್ಸಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ ಉಪಸ್ಥಿತರಿರುತ್ತಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಮಾ.15ಕ್ಕೆ ಕಜಾಪ ತಾಲೂಕು ಘಟಕ ಉದ್ಘಾಟನೆ
