ದಾಂಡೇಲಿ : ತಾಲೂಕಿನ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರನಿಗೆ ಗಾಯವಾದ ಘಟನೆ ಶನಿವಾರ ನಡೆದಿದೆ.
ನಗರದ ಅಂಬೇವಾಡಿಯ ನಿವಾಸಿ ಕಿರಣ್ ಚಂದ್ರಶೇಖರ್ ಎಂಬವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬರ್ಚಿ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡ ಇವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದು ಚಿಕಿತ್ಸೆಗೆ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.