ಕಾರವಾರ: ಕಾರವಾರದ ವೀರ ಬಹದ್ದೂರ ಹೆಂಜಾ ನಾಯ್ಕ, ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಗೆ 2025-26 ನೇ ಸಾಲಿನ 1ನೇ ಬ್ಯಾಚ್ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಕುರಿತು ಲಿಖಿತ ಪರೀಕ್ಷೆಗೆ ತರಬೇತಿ ನೀಡಲು ತರಬೇತಿದಾರರ ಆಯ್ಕೆಗಾಗಿ ಅರ್ಹ ತರಬೇತಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಸೇನಾ ಆಯ್ಕೆ ಪೂರ್ವ ತರಬೇತಿ ಹಾಗೂ ಪೋಲೀಸ್ ಇಲಾಖೆಯ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ತರಬೇತಿ ನೀಡಿ, ಅನುಭವ ಹೊಂದಿರುವವರು ಕಚೇರಿಯನ್ನು ಸಂಪರ್ಕಿಸಿ, ನಮೂನೆಯನ್ನು ಪಡೆದು, ಅರ್ಜಿಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಮಾರ್ಚ್ 29 ರ ಸಂಜೆ 4.30 ಗಂಟೆಯೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ನೆಲಮಹಡಿ, ಕೊಠಡಿ ಸಂಖ್ಯೆ: 1, ಕಾರವಾರ 581301 ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08382-226589, 08382-226589 ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ , ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ; ಅರ್ಜಿ ಆಹ್ವಾನ
