Slide
Slide
Slide
previous arrow
next arrow

ಹಳಿಯಾಳದ ವಿವಿಧೆಡೆ ರೋಜಗಾರ ದಿನಾಚರಣೆ

300x250 AD

ಹಳಿಯಾಳ: ತಾಲೂಕಿನ ಮುರ್ಕವಾಡ ಹಾಗೂ ಎನ್.ಎಸ್.ಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾರಂಭವಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಾಹಿತಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡು, ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಯಿತು.
ಉದ್ಯೋಗ ಖಾತರಿ ಯೋಜನೆಯಡಿ ದಿನಕ್ಕೆ 349 ಕೂಲಿ ನೀಡಲಾಗುತ್ತಿದ್ದು, ವಾರ್ಷಿಕವಾಗಿ ರೂ. 34900 ಗಳನ್ನು ನೀಡಲಾಗುತ್ತದೆ. ಹಾಗೂ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ಬಚ್ಚಲು ಗುಂಡಿ, ಎರೆಹುಳು ತೊಟ್ಟಿ, ದನದಕೊಟ್ಟಿಗೆ, ಕುರಿಶೇಡ್, ಕೋಳಿಶೇಡ್, ತೋಟಗಾರಿಕಾ ಬೆಳೆಗಳಾದ ಅಡಿಕೆ, ಮಾವು, ಸಿಬೆ ಹಾಗೂ ಇನ್ನಿತರೆ ಬೆಳೆಗಳನ್ನು ತೆಗೆದುಕೊಂಡು ಆರ್ಥಿಕವಾಗಿ ಸಬಲರಾಗಬಹುದು. ಕಾಮಗಾರಿ ಸ್ಥಳದಲ್ಲಿ ಸಿಗುವ ನೀರು, ನೆರಳು ಹಾಗೂ ಪ್ರಥಮ ಚಿಕಿತ್ಸೆ ಸೌಲಭ್ಯಗಳ ಕುರಿತು ತಿಳಿಸಿ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಈ ವ್ಯವಸ್ಥೆಗಳಿರುವಂತೆ ನೋಡಿಕೊಳ್ಳಲು ಮೇಟ್ ಗೆ ತಿಳಿಸಲಾಯಿತು.
65 ವರ್ಷಮೇಲ್ಪಟ್ಟ ವೃದ್ಧರು, ಅಂಗವಿಕಲರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಕೆಲಸದಲ್ಲಿ ರಿಯಾಯತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಯೋಜನೆಯಡಿ ಇರುವ ಸೌಲಭ್ಯಗಳಾದ ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಐಇಸಿ ಸಂಯೋಜಕಿ ಸೌಂದರ್ಯ ಕುರಕುರಿ, ಬಿಎಫ್ಟಿ ರವಿ ಪಿಂಪಳಕರ, ಡಿಇಒ, ಕಾಯಕ ಬಂಧುಗಳು ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top