Slide
Slide
Slide
previous arrow
next arrow

ಶ್ರೀನಿವಾಸ ಮರಾಠೆಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಮಾರ್ಚ್ ತಿಂಗಳಿಗೆ ಆಯ್ಕೆಯಾದ ಮುಂಡಗೋಡ ತಾಲೂಕಿನ ಮಳಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಎಲ್. ಮರಾಠೆ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಜಾರಿಗೆ ತರಬೇಕಾದರೆ ಪಿಡಿಒಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಹೀಗಾಗಿ ಸಾರ್ವಜನಿಕರ ಮತ್ತು ಗ್ರಾಮಗಳ ಕಲ್ಯಾಣಕ್ಕೆ ತಳ ಮಟ್ಟದಲ್ಲಿ ಎಲ್ಲರೊಂದಿಗೆ ಸಮನ್ವಯ ಸಾಧಿಸಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಕೆಲವು ಮಾನದಂಡಗಳ ಪ್ರಕಾರ ಪ್ರತಿ ತಿಂಗಳು ಆಯ್ಕೆ ಮಾಡಿ ಅಭಿನಂದನಾ ಪತ್ರ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಪ್ರಶಸ್ತಿ ಪಡೆದು ಮಾತನಾಡಿದ ಶ್ರೀನಿವಾಸ ಮರಾಠೆ ನನ್ನ ಹದಿನೈದು ವರ್ಷದ ಸೇವಾ ಅವಧಿಯಲ್ಲಿ ಪ್ರಾಮಾಣಿಕವಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಸದರಿ ಪ್ರಶಸ್ತಿ ಮುಂಬರುವ ದಿನಗಳಲ್ಲಿಯೂ ಇದೇ ರೀತಿ ಜನರಿಗೆ ಉತ್ತಮ ಸೇವೆ ನೀಡಲು ಪ್ರೇರಣೆ ನೀಡಲಿದೆ. ಇಲ್ಲಿಯವರೆಗೆ ಮಾರ್ಗದರ್ಶನ ನೀಡಿ, ಸಹಕರಿಸಿದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೆಸ್ತಾ, ಲೆಕ್ಕಾಧಿಕಾರಿ ಪರಶುರಾಮ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top