Slide
Slide
Slide
previous arrow
next arrow

ಗಾಂಧಿನಗರದ ಮನೆಯೊಂದರಲ್ಲಿ ರಾಶಿ ರಾಶಿ ನಕಲಿ ನೋಟುಗಳು

300x250 AD

ದಾಂಡೇಲಿ : ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500 ರೂ ಮುಖಬೆಲೆಯ ರಾಶಿ ನಕಲಿ ನೋಟುಗಳಿರುವ ಖಚಿತ ಮಾಹಿತಿಯಡಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಮಂಗಳವಾರ ಮಾಧ್ಯಮಕ್ಕೆ ಲಭ್ಯವಾಗಿದೆ.

ನೂರಜಾನ್ ಜುಂಜುವಾಡ್ಕರ ಎಂಬವರ ಗಾಂಧಿನಗರದಲ್ಲಿರುವ ಮನೆಯೊಂದರಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಖಾನ್ ಈತನು ಬಾಡಿಗೆದಾರನಾಗಿ ವಾಸ್ತವ್ಯವಿದ್ದನು. ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ, ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಗರ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ 500 ರೂ. ಮುಖಬೆಲೆಯ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇರುವ ಮತ್ತು ಗವರ್ನರ್ ಸಹಿ ಇಲ್ಲದೆ ಇರುವ ನೋಟಿಗೆ ಸಂಖ್ಯೆಯಿರುವ ಜಾಗದಲ್ಲಿ ಸೊನ್ನೆಯನ್ನಷ್ಟೆ ನಮೂದಿಸಿರುವ ಮತ್ತು ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ನಕಲಿ ಐವತ್ತು ನೋಟುಗಳ ಬಂಡಲ್ ನಂತೆ ಇಡಲಾಗಿದ್ದ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

300x250 AD

ಇನ್ನೂ ಈ ನಕಲಿ ನೋಟಿಗೆ ಸಂಬಂಧಪಟ್ಟ ಆ ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ಈತನನ್ನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಗರದಲ್ಲಿ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿರುವ ಈ ನಕಲಿ ನೋಟುಗಳನ್ನು ಯಾತಕ್ಕಾಗಿ ದಾಸ್ತಾನಿಡಲಾಗಿತ್ತು, ಯಾವ ಉದ್ದೇಶಕ್ಕಾಗಿ ಇದನ್ನು ಬಳಕೆ ಮಾಡಲು ಇಡಲಾಗಿತ್ತು, ಇದರ ಹಿಂದಿರುವ ಮರ್ಮವೇನು ಎನ್ನುವುದರ ಬಗ್ಗೆ ಸಮಗ್ರ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

Share This
300x250 AD
300x250 AD
300x250 AD
Back to top