ದಾಂಡೇಲಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಗೀತಾ ಶಿಕಾರಿಪುರ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷರಾದ ಪ್ರದೀಪ್ ಹೊನ್ನಪ್ಪ ಅವರು ಗೀತಾ ಶಿಕಾರಿಪುರ ಅವರನ್ನು ಅಸಂಘಟಿತ ಕಾರ್ಮಿಕರ ಸಂಘದ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.