ಕಾರವಾರ: ಕಾರವಾರ ವ್ಯಾಪ್ತಿಯಲ್ಲಿರುವ ವಾಹನ ಮಾಲೀಕರು, ಚಾಲಕರು ಹಾಗೂ ಸಾರಿಗೆ ಇಲಾಖೆಯ ಸೇವೆ ಪಡೆಯುತ್ತಿರುವ ಸಾರ್ವಜನಿಕರಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಮೇ. 28 ರಂದು ಮಧ್ಯಾಹ್ನ 12 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸೇವಾ ನ್ಯೂನತೆ ಮತ್ತು ಇನ್ನಿತರ ಸಮಸ್ಯೆಗಳಿದ್ದರೆ ಸಾರ್ವಜನಿಕರು ಖುದ್ದಾಗಿ ಹಾಜರಾಗಿ ಪರಿಹರಿಸಿಕೊಳ್ಳುವಂತೆ ಹಾಗೂ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಾನ್ ಬಿ ಮಿಸ್ಕಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ.28ಕ್ಕೆ ಸಾರಿಗೆ ಅದಾಲತ್ ಕಾರ್ಯಕ್ರಮ
