ಹೊನ್ನಾವರ:ಇಲ್ಲಿಯ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ.ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಮೇ ೨೪ರಂದು ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.
ಕಾಸ್ಮೋ ಡಿಜಿಟಲ್ ಬೆಂಗಳೂರು ಇದರ ಸಿಇಓ ರಾಜೇಶ ಪವಾರ ಹಾಗೂ ಡಿ.ವೈ.ಎಸ್.ಪಿ. ರಾಘವೇಂದ್ರ ಆರ್.ನಾಯ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು ಎಂಪಿಇ ಸೊಸೈಟಿಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಶಿವಾನಿ ಉಪಸ್ಥಿತರಿರುವರು.ಪ್ರಾಚಾರ್ಯ ಡಾ. ಡಿ.ಎಲ್.ಹೆಬ್ಬಾರ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸಾಧಕರಿಗೆ ಸನ್ಮಾನ,ಶರಾವತಿ ವಾರ್ಷಿಕ ಸಂಚಿಕೆ ಬಿಡುಗಡೆ,ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಪ್ರಕಟಣೆ ತಿಳಿಸಿದೆ.